Sunday, September 27, 2026

My Mother SHARADE ನಮ್ಮಮ್ಮ ಶಾರದೆ ಉಮಾಮಹೇಶ್ವರಿ

ನಮ್ಮಮ್ಮ ಶಾರದೆ ಉಮಾಮಹೇಶ್ವರಿ 

ರಾಗ: ಮೋಹನ  ತಾಳ: ಆಟ

ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ || ಪ ||
ಕಮ್ಮಗೋಲನ ವೈರಿಸುತನಾದ ಸೊಂಡಿಲ ಹೆಮ್ಮೆಯ ಗಣನಾಥನೆ || ಅ.ಪ ||


ಮೋರೆಕಪ್ಪಿನ ಭಾವ ಮೊರದಗಲ ಕಿವಿ ಕೋರೆದಾಡೆಯವನ್ಯಾರಮ್ಮ
ಮೂರು ಕಣ್ಣಿನ ಸುತ ಮುರಿದಿಟ್ಟ ಚಂದ್ರನ
ಧೀರ ಗಣನಾಥನೆ ಅಮ್ಮಯ್ಯ || ೧ ||


ಉಟ್ಟದಟ್ಟಿಯು ಬಿಗಿದುಟ್ಟ ಚಲ್ಲಣದ ದಿಟ್ಟ ತಾನಿವನ್ಯಾರಮ್ಮ
ಶಿವನ ಪಟ್ಟದ ರಾಣಿ ಪಾರ್ವತಿಯ ಕುಮಾರನು
ಹೊಟ್ಟೆಯ ಗಣನಾಥನೆ ಅಮ್ಮಯ್ಯ || ೨ ||


ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನ್ಯಾರಮ್ಮ
ಲೇಸಾಗಿ ಸುಜನರ ಸಲಹುವ ನೆಲೆಯಾದಿ ಕೇಶವನ ದಾಸ ಕಾಣೆ ಅಮ್ಮಯ್ಯ || ೩ ||

                                           ... ಶ್ರೀ ಕನಕದಾಸರು 


No comments:

Post a Comment